Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah
ಮೈಸೂರು: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿರುವುದು ಸುಳ್ಳು. ಅದರ ಬಗ್ಗೆ ಚರ್ಚೆ ಬೇಡ. ಯಾವುದೇ ಕಾರಣಕ್ಕೂ ತಂದೆಯವರು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂಬ ರಂಭಾಪುರಿ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಆಗಬೇಕು ಎಂದು ಯಾರೇ ಹೇಳಿಕೆ ಕೊಟ್ಟರೂ ತಪ್ಪಲ್ಲ. ಅದನ್ನು ನಿರ್ಧಾರ ಮಾಡೋದು ಶಾಸಕರು ಮತ್ತು ಹೈಕಮಾಂಡ್. ಹೈಕಮಾಂಡ್ ಏನಾದ್ರೂ ಬದಲಾವಣೆ ಬಗ್ಗೆ ಹೇಳಿದ್ಯಾ? ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮಾಧ್ಯಮದವರೊಂದಿಗೆ ಮಾತನಾಡಿ ತೆರಳುವ ವೇಳೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಸುತ್ತುವರೆದ ಕಾಂಗ್ರೆಸ್ ಕಾರ್ಯಕರ್ತರು, ಅಹವಾಲು ಕೊಡಲು ಮುಗಿಬಿದ್ದರು. ಈ ವೇಳೆ ಕಾರ್ಯಕರ್ತರನ್ನು ಸುಮ್ಮನಾಗಿಸಲು ಯತೀಂದ್ರ ಸಿದ್ದರಾಮಯ್ಯ ಸುಸ್ತಾದ ಪ್ರಸಂಗ ನಡೆಯಿತು.
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್‌ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…
ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…