ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಿದ್ದಾರೆ, ಅಸ್ಸಾಂ ಚುನಾವಣೆಯ ವೀಕ್ಷಕರಾಗಿದ್ದಾರೆ. ಹೀಗಾಗಿ ದೆಹಲಿಗೆ ಹೋಗಿದ್ದಾರೆ ಇದಕ್ಕೆ ಯಾವ ವಿಶೇಷ ಅರ್ಥಗಳು ಬೇಡ. ಮುಂದಿನ 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಸುಮ್ಮನೆ ಏನೋ ಆಗುತ್ತದೆ ಎಂದು ಕಾಯುತ್ತಿದ್ದಾರೆ ಬಿಜೆಪಿ ಯಾವಾಗಲೂ ಪರಿಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಇಂತಹ ಸಂಧರ್ಭಗಳನ್ನು ಅವರು ಕಾಯುತ್ತಿರುತ್ತಾರೆ. ನಂತರ ಕೈಗೆ ಸಿಗದ ದ್ರಾಕ್ಷಿ ಹುಳಿ ಎಂದುಕೊಂಡು ಹೋಗುತ್ತಾರೆ. ಇದು ಕೂಡ ಅಷ್ಟೇ ಎಂದು ಹೇಳಿದರು.
ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಅನಧಿಕೃತ ಹೊಂದಾಣಿಕೆಯಲ್ಲಿದ್ದರು. ಈ ಚುನಾವಣೆಯಲ್ಲಿ ಅಧಿಕೃತ ಹೊಂದಾಣಿಕೆಯಲ್ಲಿದ್ದಾರೆ. ಇದರಲ್ಲಿ ಬೇರೆ ವ್ಯತ್ಯಾಸಗಳು ಇಲ್ಲ. ಇದು ಕಾಂಗ್ರೆಸ್ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಎಂದರು.
ಮದ್ದೂರು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಸುನಿಲ್ ದತ್ ಯಾದವ್ ಅವರು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ…
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ…
ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…
ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ…