ಮೈಸೂರು: ದೇವರಾಜ ಅರಸು ಹಾಗೂ ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ದುರಹಂಕಾರದ ಪರಮಾವಧಿ, ಸಿದ್ದರಾಮಯ್ಯ ಯಾವಾಗಲೂ ನಾನೇ ನಾನೇ ಅಂತಾರೆ. ದೇವರಾಜ ಅರಸುಗಿಂತ ನಾನೇ ಒಳ್ಳೆಯ ಆಡಳಿಯ ಕೊಟ್ಟಿದ್ದು ಅಂತಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ದೇವರಾಜ ಅರಸು, ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ. ಸಿದ್ದರಾಮಯ್ಯ ಈ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನಿದೆ ಅದನ್ನು ಮೊಡಲು ಹೇಳಲಿ. ಸಿದ್ದರಾಮಯ್ಯರ ಮಗ ಈ ದೌಲತ್ ಗಿರಿ ಮಾಡುವುದನ್ನು ಮೊದಲು ಬಿಡಲಿ. ನಾಲ್ವಡಿ ಕೃಷ್ಣರಾಜ ಒಡೆಯರಗೆ ಹೋಲಿಕೆ ಮಾಡುವ ಯಾವ ರಾಜಕಾರಣಿ ಈ ದೇಶದಲ್ಲೇ ಇಲ್ಲ ಎಂದು ಕಿಡಿಕಾರಿದರು.





