ಮೈಸೂರು ನಗರ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆ: ಸಚಿವ ಎಚ್‌ಸಿಎಂ ಆರೋಪ

ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ನಿರ್ಮಾಣ ನಮ್ಮ ಮೊದಲ ಅವಧಿಯ ಸರ್ಕಾರದ ಯೋಜನೆ. ಕಳೆದ 2013ರಲ್ಲಿ ನಾವೇ ಈ ಸೇತುವೆ ಯೋಜನೆಗೆ ಕಾರ್ಯಸೂಚಿ ಸಿದ್ಧ ಮಾಡಿದ್ದೆವು. ಒಟ್ಟಾರೆ ಪ್ಲಾನ್ ಕೂಡ ತಯಾರು ಮಾಡಿದ್ದೆವು. ಯಡಿಯೂರಪ್ಪ ಅವರೇ ನನಗೆ ಕರೆ ಮಾಡಿ ಮಹದೇವಣ್ಣ ಈ ಬ್ರಿಡ್ಜ್ ಮಾಡಿಕೊಡು ಎಂದು ಪ್ರೀತಿಯಿಂದ ಹೇಳಿದ್ದರು.

ಅಂದಿನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹ ಮಹದೇವಪ್ಪ ಈ ಬ್ರಿಡ್ಜ್ ಮಾಡು ಎಂದು ಹೇಳಿದ್ದರು. ಹೀಗಾಗಿ ಸೇತುವೆ ಕಾರ್ಯ ಯೋಜನೆ ಮಾಡಿದ್ದೇವೆ. ಯೋಜನೆಗೆ ಹಣ ಜಾಸ್ತಿಯಾದ ಕಾರಣ ಅದನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಾಯಿತು. ನಾನು ಯಾವತ್ತು ಇದು ನಮ್ಮ ಯೋಜನೆ ಎಂದು ಹೇಳಿಕೊಂಡಿಲ್ಲ. ಬಿಜೆಪಿಯವರು ಹೇಳುತ್ತಿರುವುದಕ್ಕೆ ಇಂದು ನಾನು ಹೇಳಿದೆ ಅಷ್ಟೇ. ಇದು ಕಾಂಗ್ರೆಸ್ ಸರ್ಕಾರದ ಯೋಜನೆ ಅನ್ನುವುದರಲ್ಲಿ ಯಾವ ಅನುಮಾನಗಳು ಬೇಡ. ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾಯಕರು ಅಲ್ಲಿ ಇದ್ದಿದ್ದರೇ ಅದರ ಬೆರಗು ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲಿ ಈ ಸಂಘರ್ಷಕ್ಕೆ ಕೇಂದ್ರ ಅವಕಾಶ ಮಾಡಿಕೊಡಬಾರದು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

3 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

3 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

3 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

3 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

13 hours ago