ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು.
ಮಾನಸಗಂಗೋತ್ರಿಯ ಮುಖ್ಯ ಗ್ರಂಥಾಲಯದ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮೊದಲ ದಿನವೇ ನೂರಾರು ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸಹಿ ಹಾಕುವ ಮೂಲಕ ಮರ್ಯಾದಗೇಡು ಹತ್ಯೆಕ್ಕೆ ವಿರೋಧ ವ್ಯಕ್ತಪಡಿಸಿದರು.
ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್ ಮಾತನಾಡಿ, ಮರ್ಯಾದೆಯ ಹೆಸರಿನಲ್ಲಿ ಪ್ರತಿವರ್ಷ ಪ್ರಪಂಚದಲ್ಲಿ ಸುಮಾರು 5 ಸಾವಿರಕ್ಕಿಂತ ಹೆಚ್ಚು ಮಹಿಳೆಯರ ಹತ್ಯೆಗಳು ನಡೆಯುತ್ತಿವೆ ಎಂಬುದಾಗಿ ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ(ಯುಎನ್‌ಎಫ್‌ಪಿಐ) ತನ್ನ ವರದಿಯಲ್ಲಿ ಹೇಳಿದೆ. ಇತ್ತೀಚೆಗೆ ರಾಜ್ಯದ ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎಂಬ ಕಾರಣಕ್ಕಾಗಿ ಗರ್ಭಿಣಿ ಯುವತಿಯನ್ನು ಆಕೆಯ ಕುಟುಂಬಸ್ಥರೇ ಹತ್ಯೆ ಮಾಡಿದ್ದಾರೆ. ಜೀವಕೊಟ್ಟ ತಂದೆಯೇ ಜೀವ ತೆಗೆದಿರುವುದು ಪೈಶಾಚಿಕ ಕ್ರೌರ್ಯವಾಗಿದೆ ಎಂದರು.
ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ವಿರುದ್ಧ, ಸಾಮಾಜಿಕ ಬಹಿಷ್ಕಾರ ಪದ್ಧತಿಗೆ ವಿರುದ್ಧವಾಗಿ ರೂಪಿಸಿದ ಕಾಯ್ದೆಗಳು ಸ್ವಾಗತಾರ್ಹ. ಹಾಗೆಯೇ ಮರ್ಯಾದೆಗೇಡು ಹತ್ಯೆ ತಡೆಗೆ ಹೊಸ ಕಠಿಣ ಕಾನೂನನ್ನು ರೂಪಿಸಬೇಕು ಎಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಭೇಟಿ ವೇಳೆ ಸಹಿ ಸಂಗ್ರಹ ಮತ್ತು ಕಠಿಣ ಕಾನೂನು ರೂಪಿಸುವಂತೆ ಆಗ್ರಹ ಪತ್ರವನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.
ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ ಮಾತನಾಡಿ, ಸರ್ಕಾರವು ಅಂತರ್ಜಾತಿ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಿದ್ದರೂ ವಿವಾಹ ನಡೆದ ನಂತರ ಸೂಕ್ತ ಕಾಯಿದೆಯನ್ನು ಜಾರಿಗೆ ತಂದು ರಕ್ಷಣೆ ನೀಡಬೇಕು ಎಂದರು.
ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ ಮಾತನಾಡಿದರು. ವಿದ್ಯಾರ್ಥಿಗಳಾದ ಶಿವು, ನಾಗಮಲ್ಲು, ಮುತ್ತು, ಮಹೇಶ್, ಸಂತೋಷ್, ರವಿನಾಯಕ, ಚೆಲುವರಾಜ್, ನಾಗರಾಜು, ಅರುಣ್, ಶಿವು ವಿರಾಟ್, ಕಿರಣ್, ಹರೀಶ್, ಹೇಮಂತ್, ರಕ್ಷಿ ತಾ, ಮುತ್ತುರಾಜು, ಶಿವುಕೋಟೆ, ವರುಣ್, ಹೇಮಂತ್, ಗೌತಮ್, ಅಭಿ, ಮಂಜುಳಾ ಮುಂತಾದವರಿದ್ದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…