ಮೈಸೂರು ನಗರ

ಸಣ್ಣ ಕೈಗಾರಿಕೆಗಳು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ: ಎಚ್‌ಸಿ ಮಹದೇವಪ್ಪ

ಮೈಸೂರು: ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ನಂತರ ಸುಮಾರು 80 ಸಾವಿರಕ್ಕೂ ಹೆಚ್ಚು ಎಂಎಸ್‌ಎಂಗಳು ಮುಚ್ಚಿ ಹೋಗಿವೆ. ರಾಜ್ಯ ಸರ್ಕಾರ ಈಗ ಮತ್ತೆ ಅವುಗಳ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

ಗ್ರಾಮೀಣಾಭಿವೃದ್ದಿ ಸಚಿವನಾಗಿದ್ದ ಸಂದರ್ಭದಲ್ಲಿ ಮಹಿಳಾ ಉದ್ಯಮಕ್ಕಾಗಿ ಕಡಕೊಳದ ಬಳಿ ಜಮೀನನ್ನು ನೀಡಲಾಗಿತ್ತು. ಮಹಿಳೆಯರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿದರೆ ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ತಿಳಿಸಿದರು.

ಕಾಸಿಯಾ ಅಧ್ಯಕ್ಷರಾದ ಎಂಜಿ ರಾಜಗೋಪಾಲ್‌ ಮಾತನಾಡಿ, ಮಹಿಳೆಯರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ. ಈ ಬಾರಿ ಒಟ್ಟಾರೆ 85 ಮಳಿಗೆಗಳಿದ್ದು, ಮಹಿಳೆಯರಿಂದಲೇ ತಯಾರಿಸಲ್ಪಟ್ಟ ಮಕ್ಕಳ ಆಟಿಕೆಗಳು, ಆಹಾರೊತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಮಹಿಳೆಯರ ಮಳಿಗೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮೂರು ಮಳಿಗೆಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ಭಾಗವಹಿಸಿದ್ದ ಪ್ರತಿಯೊಬ್ಬ ಮಹಿಳೆಯರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾದ್ಯಕ್ಷರಾದ ಡಾ.ಪುಷ್ಪ ಅಮರನಾಥ್‌, ಕಾಸಿಯಾ ಅಧ್ಯಕ್ಷರಾದ ಬಿ.ಆರ್‌.ಗಣೇಶ್‌ ರಾವ್‌, ಜಂಟಿ ಕಾರ್ಯದರ್ಶಿ ಎನ್‌.ಸತೀಶ್‌, ಜೆ.ಎಸ್‌.ಬಾಬು ಸೇರಿದಂತೆ ಇತರರು ಹಾಜರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

2 hours ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

2 hours ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

2 hours ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

10 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

15 hours ago