ಮೈಸೂರು: ಸ್ನೇಹಮಯಿ ಕೃಷ್ಣ ಒಬ್ಬ ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿ. ಅವನ ವಿರುದ್ಧ 43 ಪ್ರಕರಣಗಳು ದಾಖಲಾಗಿವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಪದೇ ಪದೇ ಆಗ್ರಹಿಸುತ್ತಿದ್ದಾನೆ. ಪ್ರತಿನಿತ್ಯ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ವಿರುದ್ಧ ಒತ್ತಡ ಹೇರುತ್ತಿದ್ದಾನೆ. ಬಿಜೆಪಿ ನಾಯಕರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾನೆ ಎಂದು ಗಂಭೀರ ಆರೋಪ ಮಾಡಿದರು.
ಮಾಧ್ಯಮಗಳ ಮುಂದೆ ಸುಳ್ಳು ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾನೆ. ಸ್ನೇಹಮಯಿ ಕೃಷ್ಣ ಕೇಂದ್ರ ಸರ್ಕಾರದ ಸೂತ್ರಧಾರನಂತೆ ವರ್ತನೆ ಮಾಡುತ್ತಿದ್ದು, ಮೊದಲು ಅವನನ್ನು ಲೋಕಾಯುಕ್ತ ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…