ಮೈಸೂರು ನಗರ

ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ ಮಾಡಿಕೊಂಡು ನನ್ನ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಈಗ ಸಿದ್ದರಾಮಯ್ಯ ಪರ ಮಾತನಾಡಿರುವ ಜಿ.ಟಿ.ದೇವೇಗೌಡ ಕಳೆದ ಮೂರು ತಿಂಗಳಿನಿಂದ ಏನು ಮಾಡ್ತಾ ಇದ್ರು ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾದಲ್ಲಿ ಜಿ.ಟಿ.ದೇವೇಗೌಡ ಅವರದ್ದು ಕೂಡ ಅಕ್ರಮವಿರಬಹುದು. ಆ ಕಾರಣಕ್ಕೆ ಈಗ ಎಲ್ಲಾ ನಾಯಕರು ಒಂದಾಗಿದ್ದಾರೆ. ಎಲ್ಲದರ ಬಗ್ಗೆಯೂ ಇ.ಡಿಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

58 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

1 hour ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

1 hour ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

1 hour ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

1 hour ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

1 hour ago