ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ ಮಾಡಿಕೊಂಡು ನನ್ನ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಈಗ ಸಿದ್ದರಾಮಯ್ಯ ಪರ ಮಾತನಾಡಿರುವ ಜಿ.ಟಿ.ದೇವೇಗೌಡ ಕಳೆದ ಮೂರು ತಿಂಗಳಿನಿಂದ ಏನು ಮಾಡ್ತಾ ಇದ್ರು ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾದಲ್ಲಿ ಜಿ.ಟಿ.ದೇವೇಗೌಡ ಅವರದ್ದು ಕೂಡ ಅಕ್ರಮವಿರಬಹುದು. ಆ ಕಾರಣಕ್ಕೆ ಈಗ ಎಲ್ಲಾ ನಾಯಕರು ಒಂದಾಗಿದ್ದಾರೆ. ಎಲ್ಲದರ ಬಗ್ಗೆಯೂ ಇ.ಡಿಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…