ಮೈಸೂರು ನಗರ

Caste Census; ಕಾನೂನು ಹೋರಾಟಕ್ಕೆ ಮುಂದಾದ ಸ್ನೇಹಮಯಿ ಕೃಷ್ಣ

ಮೈಸೂರು : ಜಾತಿಗಣತಿ ವರದಿ (Caste Census) ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸಲು ಮುಂದಾದರೆ ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.

ಗುರುವಾರ (ಏ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಯೇ ಅನಧಿಕೃತವಾಗಿದೆ. ಆಯೋಗದ ಅಧ್ಯಕ್ಷ ಕಾಂತರಾಜು ವರದಿಗೆ ಸಹಿಯನ್ನೇ ಮಾಡಿಲ್ಲ. ಹೀಗಾಗಿ ಸಹಿ ಇಲ್ಲದ ವರದಿ ಹೇಗೆ ಅಧಿಕೃತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಕೆಲವು ದಾಖಲೆಗಳನ್ನು ಅವರೇ ಸಲ್ಲಿಸಿಕೊಂಡು ಅವರಿಗೆ ಬೇಕಾದ ಹಾಗೆ ವರದಿ ಮಾಡಿಕೊಂಡಿದ್ದಾರೆ. ಮನೆ ಮನೆಗೆ ತೆರಳಿ ದತ್ತಾಂಶ ಸಂಗ್ರಹ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಒಂದು ಈ ವೇಳೆ ಜಾತಿ ಗಣತಿ ವರದಿ ಜಾರಿಯಾದರೆ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಇದರ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಇದೀಗ ಈ ಬಗ್ಗೆ ಪತ್ರದ ಮೂಲಕ ಜಯ ಪ್ರಕಾಶ್ ಹೆಗ್ಡೆ ಅವರು ಸ್ಪಷ್ಟನೆ ನೀಡಬೇಕು ಎಂದು ಮನವಿ ಮಾಡಿದ್ದೇನೆ. 15 ದಿನಗಳ ಕಾಲಾವಕಾಶದಲ್ಲಿ ಸ್ಪಷ್ಟನೆ ನೀಡಿದಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು.

ಸ್ಪಷ್ಟನೆ ಸಿಗದಿದ್ದರೆ ಮೊದಲಿಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ದೂರು ದಾಖಲಿಸಿಕೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

46 mins ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

47 mins ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

2 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

2 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

3 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

4 hours ago