ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದು, ಇವರಿಗಾಗಿ ಪೊಲೀಸರು ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹೌದು! ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪಾರವರ ವಿರುದ್ಧ ಸೀರೆ ಕಳ್ಳತನ ಮಾಡಿದ್ದಾರೆಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ರೂಪಾ ಅವರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ಧ ಕೃಷ್ಣರಾಜ ಪೊಲೀಸ್ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆದರೆ ಈ ಮಧ್ಯೆಯೇ ಸ್ನೇಹಮಯಿ ಕೃಷ್ಣ ಅವರು ನಾಪತ್ತೆಯಾಗಿದ್ದಾರೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರು ತನಿಖೆ ನಡೆಸಲು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?
ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನಾಡಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸೀರೆಗಳನ್ನು ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯದರ್ಶಿ ರೂಪಾ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ಸಾಕ್ಷಿಯಾಗಿ ವಿಡಿಯೋ ಸಮೇತ ದೂರು ನೀಡಿದ್ದರು.
ಈ ಆರೋಪದ ಹಿನ್ನೆಲೆಯಲ್ಲಿ ರೂಪಾ ಅವರು ತಮ್ಮ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…