Mysore
22
overcast clouds

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಸೆ.22ರಿಂದ ಅಕ್ಟೋಬರ್.‌7ರವರೆಗೆ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಅವರು, ಸಮೀಕ್ಷೆಯು ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್‌ ಆಪ್‌ ಮೂಲಕ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತದ ಚೀಟಿ ಮತ್ತು ಆಧಾರ್‌ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ ಎಂದು ಹೇಳಿದರು.

ಇದನ್ನು ಓದಿ; ವಿಧಾನಪರಿಷತ್‌ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಡಿತರ ಚೀಟಿ ಹಾಗೂ ಆಧಾರ್‌ ಕಾರ್ಡ್‌ ಕಡ್ಡಾಯವಾಗಿರುತ್ತದೆ. 6 ವರ್ಷ ಮೇಲ್ಪಟ್ಟು ಪಡಿತರ ಚೀಟಿ ಇಲ್ಲದಿರುವ ಮತ್ತು ಪಡಿತರ ಚೀಟಿಯಲ್ಲಿ ಇಲ್ಲದಿರುವ ಕುಟುಂಬ ಸದಸ್ಯರ ಆಧಾರ್‌ ಕಾರ್ಡ್‌ ಕಡ್ಡಾಯವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್‌ ಕುಮಾರ್‌, ಪಾಲಿಕೆ ಆಯುಕ್ತ ಶೇಕ್‌ ತನ್ವಿರ್‌ ಆಸಿಫ್‌ ಹಾಗೂ ಬಿಸಿಎಂ ಅಧಿಕಾರಿ ರಾಘವೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು.

Tags:
error: Content is protected !!