ಮೈಸೂರು: ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು, ಸಮೀಕ್ಷೆಯು ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತದ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ ಎಂದು ಹೇಳಿದರು.
ಇದನ್ನು ಓದಿ; ವಿಧಾನಪರಿಷತ್ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. 6 ವರ್ಷ ಮೇಲ್ಪಟ್ಟು ಪಡಿತರ ಚೀಟಿ ಇಲ್ಲದಿರುವ ಮತ್ತು ಪಡಿತರ ಚೀಟಿಯಲ್ಲಿ ಇಲ್ಲದಿರುವ ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್ ಹಾಗೂ ಬಿಸಿಎಂ ಅಧಿಕಾರಿ ರಾಘವೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…