ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಚೌಧರಿ ಸಲಹೆ
ಮೈಸೂರು : ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಮುನ್ನೆಚ್ಚರಿಕೆಯ ಜೊತೆ ಅಪರಿಚಿತರ ಸ್ನೇಹ ಮಾಡುವ ಬಗ್ಗೆಯೂ ಎಚ್ಚರ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಚೌಧರಿ ಹೇಳಿದರು.
ನಗರದ ಹೂಟಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿ-ಕೇರ್ ಸಂಸ್ಥೆ ವತಿಯಿಂದ ನಡೆದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಆವರು ಮಾತನಾಡಿದರು.
ಪ್ರಸ್ತುತ ಹೆಣ್ಣು ಮಕ್ಕಳಿಗೆ ಶಿಕ್ಷಣ ಅಗತ್ಯ. ಮದುವೆಗು ಮುನ್ನ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಅಲಂಕರಿಸಿದರೆ ಯಾರ ಮೇಲು ಅವಲಂಬಿತರಾದಗೆ ಸ್ವಾಲಂಬಿಗಳಾಗಿ ಬದುಕಬಹುದು. ಸರ್ಕಾರಿ ಹಾಗೂ ಕನ್ನಡ ಮಾಧ್ಯಮ ಶಾಲೆ ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿರುವವರು ನಮ್ಮ ನಡುವೆ ಇದ್ದಾರೆ. ಹೀಗಾಗಿ ಮಾಧ್ಯಮ ಹಾಗೂ ಶಾಲೆ ಯಾವುದೇ ಇರಲಿ ಶಿಕ್ಷಿತರಾಗುವುದು ಮುಖ್ಯ ಎಂದು ಅಭಿಪ್ರಾಯಿಸಿದರು.
ಮಕ್ಕಳಿಗೆ ಹೀಗಿನಿಂದಲೇ ಛಲ ಹಾಗೂ ಧೈರ್ಯ ಕಲಿಸಿಕೊಟ್ಟಾಗ ಮಾತ್ರ ಮುಂದೆ ಸಮಸ್ಯೆಗಳನ್ನು ಮೆಟ್ಟಿನಿಂತು ಸಾಧನೆ ಮಾಡಲು ಸಹಾಯವಾಗುವುದು. ಮಕ್ಕಳಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆಗಳನ್ನು ತಿಳಿಸಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.
ವಿ.ಕೇರ್ ಸಂಸ್ಥೆಯು ಉತ್ತಮವಾದ ಸೇವೆ ಮಾಡುತ್ತಿದೆ. ಯಾವುದೇ ಸೌಲಭ್ಯಗಳನ್ನು ಪಡೆಯದೇ ವಂಚಿತರಾದ ಮಕ್ಕಳನ್ನು ಗುರುತಿಸಿ ಆವರಿಗೆ ಉತ್ತಮ ಕೌಶಲ್ಯಗಳನ್ನು ನೀಡಿ ಸಮಾಜದಲ್ಲಿ ಉತ್ತಮ ನಾಗರೀಕರಾನ್ನಾಗಿ ಮಾಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಟಿ.ದೇವೆಗೌಡ ಮಾತನಾಡಿ, ತಂದೆ-ತಾಯಿಗಳು ಕುಲಿ ಕೆಲಸ ಮಾಡಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ ಎಂಬ ನಂಬಿಕೆ ಇರುತ್ತದೆ. ಮಕ್ಕಳು ಅವರ ನಂಬಿಕೆಗೆ ಗಾಸಿಗೊಳಿಸದೆ ಸಾಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಮಕ್ಕಳು ಶಿಸ್ತು, ಶಾಂತಿ, ಪ್ರೀತಿ ಇಂತಹ ಕೌಶಲ್ಯಗಳನ್ನು ಆಳವಡಿಸಿಕೊಂಡು ಉತ್ತಮ ಮಾರ್ಗದಲ್ಲಿ ನಡೆಯಬೇಕು. 14 ದಿನಗಳಿಂದ ಶಿಬಿರದಲ್ಲಿ ಕಲಿತ ಕೌಶಲ್ಯಗಳನ್ನು ಆಳವಡಿಸಿಕೊಂಡು ಜೀವನದಲ್ಲಿ ಸಾಧನೆಯ ಕಡೆ ಗಮನ ಹರಿಸಬೇಕು ಎಂದರು.
ಪೋಷಕರು ಮದುವೆಗೆ ಹೆಚ್ಚು ಹಣವನ್ನು ದುಂದು ವೆಚ್ಚ ಮಾಡಿ ಸಾಲಗಾರರಾಗುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಕುವೆಂಪ ಅವರ ಮಂತ್ರ ಮಾಗಲ್ಯವನ್ನು ಅನುಸರಿಸಬೇಕು. ಈ ಮೂಲಕ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದರು.
ನಗರ ಪ್ರದೇಶಗಳಿಗೆ ಸೀಮಿತವಾಗಿರುವ ಬೇಸಿಗೆ ಶಿಬಿರಗಳನ್ನು ಪ್ರತಿ ಹಳ್ಳಿಯಲ್ಲೂ ನಡೆಸಬೇಕು. ಇದರಿಂದ ಹಳ್ಳಿ ಮಕ್ಕಳಿಗೂ ಉತ್ತಮ ವೇದಿಕೆ ಸಿಗಲಿದೆ. ಹೀಗಾಗಿ ಸರ್ಕಾರ ಇಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸುತ್ತೆನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಆದಿವಾಸಿ ಮಕ್ಕಳಿಗೆ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ತಜ್ಷೆ ಡಾ.ರಾಮೇಶ್ವರಿ ವರ್ಮಾ, ಮೈಸೂರು ಗ್ರಾಮಾಂತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಜೆಎಸ್‌ಎಸ್ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಎಂ.ಕಿಶೋರ್, ವಿ-ಕೇರ್ ಸಂಸ್ಥೆಯ ಸಂಸ್ಥಾಪಕ ಡಾ.ಕುಮುದಿನಿ ಅಚ್ಚಿ ಉಪಸ್ಥಿತರಿದ್ದರು.
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…
ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ…
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…