ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ನಗರದಲ್ಲಿ ಇಂದು ಮಾನತಾಡಿದ ಅವರು, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ. ಅದಕ್ಕೆ ನೀವು ಸ್ಪಷ್ಟನೆ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.
ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಇದ್ದಕಿದ್ದಂತೆ ಮತಗಳು ಹೆಚ್ಚಾಗಿರುವುದರ ಕುರಿತು ದೇಶದೆಲ್ಲೆಡೆ ಅನುಮಾನ ವ್ಯಕ್ತವಾಗಿದೆ ಎಂದರು.
ಬಿಜೆಪಿ ಸರ್ಕಾರವು ದೇಶಾದಾದ್ಯಂತ ತಮ್ಮ ಪ್ರಾಬಲ್ಯ ಹೊಂದಲು ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜೊತೆಗೆ ಸಿಬಿಐ, ಇಡಿ, ಐಟಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಕೂಡ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇನ್ನು ಗುತ್ತಿಗೆಯಲ್ಲಿ ರಾಜ್ಯ ಸರ್ಕಾರ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ರಾಜ್ಯ ಸರ್ಕಾರದ ಅಧಿಕಾರ. ಅದನ್ನು ಪ್ರಶ್ನಿಸಬಾರದು. ಇದರ ಕುರಿಅಗಿ ನ್ಯಾಯಾಲಯದ ಮೊರೆ ಹೋಗುವುದಕ್ಕೆ ಬಿಜೆಪಿಗೆ ಅವಕಾಶವಿದೆ ಎಂದು ತಿಳಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…