ಮೈಸೂರು ನಗರ

ಬಜೆಟ್‌ ನಲ್ಲಿ ಕೆಲವನ್ನು ಕೊಟ್ಟಿದ್ದಾರೆ ಕೆಲವನ್ನು ಕೊಟ್ಟಿಲ್ಲ: ಟಿ.ಎಸ್‌. ಶ್ರೀ ವತ್ಸ

ಮೈಸೂರು: ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಮತ್ತು ಆರೋಗ್ಯ, ಶಿಕ್ಷಣಕ್ಕೆ ಅನುಕೂಲವಾಗುವಂತಹ ಕೆಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದರೂ ಅದರಲ್ಲಿ ಕೆಲವನ್ನು ಕೊಟ್ಟಿದ್ದಾರೆ, ಕೆಲವನ್ನು ಕೊಟ್ಟಿಲ್ಲ ಎಂದು ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಟೀಕಿಸಿದ್ದಾರೆ.

ಇಂದು ಬಜೆಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಬೇಡಿಕೆ ಇಟ್ಟಿದ್ದರೂ ನೀಡಿಲ್ಲ. ಕಳೆದ ಬಾರಿ ಪ್ರಸ್ತಾಪಿಸಿದ್ದ ಕಿದ್ವಾಯಿ, ಫಿಲ್ಮ್‌ಸಿಟಿಯನ್ನು ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ ನಗರಕ್ಕೆ ಪೂರಕವಾಗುವ ಪ್ರವಾಸೋದ್ಯಮಕ್ಕೆ ಆದ್ಯತೆನೀಡಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಸಾರ್ವಜನಿಕರ ವಿರೋಧ ಇದ್ದರೂ ಕೇಂದ್ರೀಯ ಬಸ್ ನಿಲ್ದಾಣವನ್ನು ಬನ್ನಿಮಂಟಪದಲ್ಲಿ ನಿರ್ಮಿಸಲು ಘೋಷಣೆ ಮಾಡಲಾಗಿದ್ದು, ಸಂಘ ಸಂಸ್ಥೆಗಳ ಪದಾಧಿಕಾರಿಗಳ ಮನವೊಲಿಸಿ ಘೋಷಣೆ ಮಾಡಿದ್ದರೆ ಸರಿಯಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಸಲ್ಮಾನರ ಪರವಾಗಿರುವ ಬಜೆಟ್ ಮಂಡಿಸಿ ಅಲ್ಪಸಂಖ್ಯಾತರನ್ನು ಒಲೈಸಿದ್ದಾರೆ. ದಲಿತರು, ಹಿಂದುಳಿದ ವರ್ಗಗಳ ಅನುದಾನ ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago