ಮೈಸೂರು: ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪ್ರಿಯಾಂಕಾ ಗಾಂಧಿ ನಾಳೆ ( ಅಕ್ಟೋಬರ್ 23 ) ನಾಮಪತ್ರ ಸಲ್ಲಿಸಲಿದ್ದು, ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ತಾಯಿ ಸೋನಿಯಾ ಗಾಂಧಿ ಜತೆ ಬಂದಿಳಿದಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡಿದ್ದಾರೆ. ಇಂದು ನಗರದಲ್ಲಿಯೇ ವಾಸ್ತವ್ಯ ಹೂಡಲಿರುವ ಅವರು ನಾಳೆ ವಯನಾಡಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ಸಂದರ್ಭದಲ್ಲಿ ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…