ಮೈಸೂರು ನಗರ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ ? ಸಿಎಂ ಸ್ಪಷ್ಟನೆ ಹೀಗಿದೆ…

ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೆ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟೀಕರಿಸಿದ್ದಾರೆ.

ಇನ್ನು ದಸರಾ ಉದ್ಘಾಟನೆಗೆ ಯಾರನ್ನ ಕರೆಸಲಾಗುತ್ತದೆ ಎಂಬ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಸರ್ಕಾರದ ನಿರ್ಧಾರ ಏನಿದೆ ಎಂಬುದನ್ನ ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

32 mins ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

50 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

1 hour ago

ಹಳೆ ಕೆಸರೆಯ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಕಸದ ರಾಶಿ

ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…

2 hours ago

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

5 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

5 hours ago