ಮೈಸೂರು: ಇಂದಿನಿಂದ ಏಪ್ರಿಲ್.4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಮೊದಲ ದಿನವಾದ ಇಂದು ಅತ್ಯಂತ ಉತ್ಸಾಹದಿಂದಲೇ ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ.
ಮೈಸೂರು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 39103 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 19,114 ಮಂದಿ ಬಾಲಕರು, 18,970 ಮಂದಿ ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಪ್ರತಿಯೊಂದು ಕ್ಷಣವನ್ನು ಪ್ರತ್ಯೇಕ ಸಿಬ್ಬಂದಿಗಳು ನಿಗಾ ಇಡಲಿದ್ದಾರೆ. ಬೇಸಿಗೆ ಹಿನ್ನೆಲೆಯಲ್ಲಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.