ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿ, ದಾಖಲೆಗಳ ಸಮೇತ ಮನವಿ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಅವರು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ 11 ಜನರ ಸಾವಿನ ಸಂಬಂಧ ಈ ಹಿಂದೆ ಅಂದರೆ 05.06.2025 ಮತ್ತು 06.06.2025 ರಂದು ನಾನು ನೀಡಿದ ದೂರರ್ಜಿಗೆ ಪೂರಕವಾಗಿ ಮತ್ತಷ್ಟು ಮಾಹಿತಿ ಮತ್ತು ದಾಖಲಾತಿಗಳನ್ನು ನೀಡುತ್ತಿದ್ದೇನೆ.
ಸದರಿ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ತಾವು ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯಲ್ಲಿ ನನ್ನ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಅಳವಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಸದರಿ ಕಾಲ್ತುಳಿತ ಕೃತ್ಯದಿಂದ ಆದ 11 ಜನರ ಸಾವಿಗೆ ಪ್ರಮುಖ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್‌ರನ್ನು ಆರೋಪಿಯನ್ನಾಗಿಸಿ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 123/2025 ಸಂಖ್ಯೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…