ಮೈಸೂರು ನಗರ

ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐಗೆ ವಹಿಸಿ: ಸ್ನೇಹಮಯಿ ಕೃಷ್ಣ ಆಗ್ರಹ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿ, ದಾಖಲೆಗಳ ಸಮೇತ ಮನವಿ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಅವರು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ 11 ಜನರ ಸಾವಿನ ಸಂಬಂಧ ಈ ಹಿಂದೆ ಅಂದರೆ 05.06.2025 ಮತ್ತು 06.06.2025 ರಂದು ನಾನು ನೀಡಿದ ದೂರರ್ಜಿಗೆ ಪೂರಕವಾಗಿ ಮತ್ತಷ್ಟು ಮಾಹಿತಿ ಮತ್ತು ದಾಖಲಾತಿಗಳನ್ನು ನೀಡುತ್ತಿದ್ದೇನೆ.

ಸದರಿ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ತಾವು ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯಲ್ಲಿ ನನ್ನ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಅಳವಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸದರಿ ಕಾಲ್ತುಳಿತ ಕೃತ್ಯದಿಂದ ಆದ 11 ಜನರ ಸಾವಿಗೆ ಪ್ರಮುಖ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್‌ರನ್ನು ಆರೋಪಿಯನ್ನಾಗಿಸಿ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 123/2025 ಸಂಖ್ಯೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

11 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

12 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

13 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

16 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

16 hours ago