ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗಿಯಾಗಿದ್ದರು.





