Stampede tragedy: Vatal Nagaraj demands ₹5 crore compensation.
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ 11 ಮಂದಿಗೆ 5 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಅವರು, ರಾಜ್ಯ ಸರ್ಕಾರ ಹಾಗೂ ಕ್ರಿಕೆಟ್ ಮಂಡಳಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಘಟನೆಯ ನೈತಿಕ ಹೊಣೆ ಹೊತ್ತು ಯಾರೂ ರಾಜೀನಾಮೆ ಕೊಡಲಿಲ್ಲ. ಪ್ರಕರಣವನ್ನು ಸಂಪೂರ್ಣವಾಗಿ ಮುಚ್ಚಿಹಾಕಿದ್ದಾರೆ. ಕ್ರಿಕೆಟ್ ಮಂಡಳಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ 5 ಕೋಟಿಯನ್ನು ಕೂಡಲೇ ನೀಡಬೇಕು. ಸರ್ಕಾರ ಸಂಭ್ರಮಾಚರಣೆಯನ್ನು ನಾವು ಮಾಡಿಲ್ಲ ಅಂತಾ ಹೇಳಿದೆ. ಆದರೆ ವಿಧಾನಸೌದದ ಬಳಿ ಆಟಗಾರರನ್ನು ಕರೆಸಿ ಕುಟುಂಬಸ್ಥರ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ತನಿಖಾ ತಂಡ ಈಗಾಗಲೇ ವರದಿ ನೀಡಿದೆ. ಆ ವರದಿ ನ್ಯಾಯಾಧೀಶರು ಕೊಟ್ಟ ವರದಿಯಂತಿಲ್ಲ. ಸರ್ಕಾರವೇ ಬರೆದುಕೊಂಡ ವರದಿಯಾಗಿದೆ ಎಂದು ಆರೋಪಿಸಿದರು.
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…