Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಪ್ರಜೆಗಳು ಅನೇಕ ಬಾರಿ ಒದಗಿಸಿಕೊಟ್ಟಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ರಾಜಕೀಯದಲ್ಲಿ ದೀರ್ಘಕಾಲದಿಂದ ಇರಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ರಾಜ್ಯದ ಜನರಿಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಬಳಿಕ ನಾಳೆ ವಿಜಯದಶಮಿ ದಿನದ ಪ್ರಯುಕ್ತ ವಿಶ್ವ ವಿಖ್ಯಾತ ಜಂಬೂಸವಾರಿ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ರಾಜಕಾರಣದಲ್ಲಿ ಹೊಗಳುವವರು ಮತ್ತು ತೆಗಳುವವರು ಇಬ್ಬರೂ ಇದ್ದೇ ಇರುತ್ತಾರೆ. ಇದರಂತೆಯೇ ಅಭಿಮಾನಿಗಳು ಹಾಗೂ ಶತ್ರುಗಳು ಸಹ ಇರುತ್ತಾರೆ. ನಾನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇನೆ. ಹೀಗಾಗಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ಇದ್ದಾಗ ಮಾತ್ರ ಅದು ಯಶಸ್ವಿಯಾಗುತ್ತದೆ ಎಂದು ಹೇಳಿದರು.

ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಸರ್ಕಾರದ ಜಾಹೀರಾತಿನ ಬಗ್ಗೆ ಪ್ರತಿಕ್ರಿಯೆ ನೀಡಿ, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷೆಯನ್ನು ದಸರಾ ಹಬ್ಬದ ಪ್ರತೀಕವಾಗಿದೆ.

ವಿಜಯನಗರ ಅರಸರ ಜಯದ ಸಂಕೇತವಾಗಿ ಆರಂಭಿಸಲಾದ ಆಯುಧಪೂಜೆ ದಸರಾ ಉತ್ಸವವನ್ನು ಮೈಸೂರು ಒಡೆಯರ್ ರವರು ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಅವರು ದುಷ್ಟರ ಸಂಹಾರ ಆಗಬೇಕಿದೆ ಎಂದು ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು ಈ ರೀತಿ ಸುಳ್ಳು ಮಾತನಾಡುವುದು ತಪ್ಪು. ಕೋರ್ಟ್‌ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದರು.

 

Tags:
error: Content is protected !!