State BJP president's name to be announced within 10 days L Nagendra
ಮೈಸೂರು: ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ವಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಹಲವು ನಾಯಕರು ಆಗಾಗ ಧ್ವನಿ ಎತ್ತುತ್ತಲೇ ಬಂದಿದ್ದಾರೆ. ಮುಖ್ಯವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ವಿಜಯೇಂದ್ರ ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಬೇಡ ಎಂದು ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಗಳ ಅಧ್ಯಕ್ಷರ ಹೆಸರನ್ನು ಇನ್ನು ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಅವರು, ಇನ್ನು 10 ದಿನದೊಳಗೆ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನು ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಯಾವುದೇ ಭಿನ್ನಮತದ ಸಭೆ ನಡೆಸಿಲ್ಲ. ಮಾಜಿ ಸಂಸದರ ಜನ್ಮದಿನದ ಆಚರಣೆ ಮಾಡ್ತಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…