ಮೈಸೂರು ನಗರ

ಇದೊಂದು ಕಟ್‌ ಅಂಡ್‌ ಪೇಸ್ಟ್‌ ಬಜೆಟ್: ರಾಜ್ಯ ಬಜೆಟ್‌ ಬಗ್ಗೆ ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್‌ ಕಟ್‌ ಅಂಡ್‌ ಪೇಸ್ಟ್‌ ಬಜೆಟ್‌ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.

ರಾಜ್ಯ ಬಜೆಟ್‌ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ರಾಹುಕಾಲ ಅಂತ ಮೂರು ನಿಮಿಷ ಮುಂಚಿತವಾಗಿ ಆರಂಭಿಸಿದ್ದರು. ವರ್ಷದಿಂದ ವರ್ಷಕ್ಕೆ ಪುಸ್ತಕದ ಬಜೆಟ್ ಪ್ರತಿ ದಪ್ಪವಾಗುತ್ತಿದೆ. ಆದರೆ ಬಜೆಟ್‌ನಲ್ಲಿ ಹೇಳುವುದು ಒಂದು, ಮಾಡೋದು ಇನ್ನೊಂದು. ೩.೭೦ ಲಕ್ಷ ಕೋಟಿಯಲ್ಲಿ ಇದುವರೆಗೂ ಯಾವ ಅಭಿವೃದ್ಧಿ ಆಯಿತು ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಖಜಾನೆಯಲ್ಲಿ ಸ್ವಲ್ಪವೂ ದುಡ್ಡಿಲ್ಲ. ಈ ಹಿನ್ನೆಲೆಯಲ್ಲಿ ನೀವು ಯಾರನ್ನೂ ಮೂರ್ಖರನ್ನಾಗಿ ಮಾಡಲು ಹೊರಟಿದ್ದೀರಾ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಹದಿನಾರು ಬಜೆಟ್ ಮಂಡಿಸಿದ್ದಾರೆಯೇ ಹೊರತು ಯಾವ ಬದಲಾವಣೆ ಹಾಗೂ ಸುಧಾರಣೆ ತಂದಿಲ್ಲ.‌ ಇದೊಂದು ಕಟ್ ಅಂಡ್ ಪೇಸ್ಟ್ ‌ಆಗಿದೆ ಎಂದು ಬಜೆಟ್‌ ವಿರುದ್ಧ ಕಿಡಿಕಾರಿದರು.

ಇನ್ನು ಬಜೆಟ್‌ನಲ್ಲಿ ನೀವು ಮೈಸೂರಿಗೆ ಏನು ಕೊಟ್ಟಿದ್ದೀರಿ. ಹಳೆಯದನ್ನೇ ಹೇಳ್ತಾ ಇದ್ದೀರಿ. ಈಗಾಗಲೇ ನಿಮ್ಹಾನ್ಸ್‌ ಕೆಲಸ ಶುರುವಾಗಿದೆ. ಚಿತ್ರನಗರಿ ಎಂದು ಎಷ್ಟು ವರ್ಷದಿಂದ ಹೇಳ್ತಾ ಇದ್ದೀರಿ. ಜನತೆ ರೇಷ್ಮೆ ಬೆಳೆಯನ್ನೇ ಮರೆತುಬಿಟ್ಟಿದ್ದಾರೆ. ರೇಷ್ಮೆ ಬೆಳೆಯನ್ನೇ ಬೆಳೆಯದಿರುವಾಗ ಮಾರುಕಟ್ಟೆ ಇಟ್ಟುಕೊಂಡು ಏನು ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

7 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

7 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

9 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

9 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

9 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

10 hours ago