ಮೈಸೂರು: ಇದೇ ಮಾರ್ಚ್.7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. WTO ಒಪ್ಪಂದ ಜಾರಿಗೆ ಬಂದ ನಂತರ ರೈತರ ಜೀವನ ಚಿಂತಾಜನಕವಾಗಿದೆ. ಈ ಬಜೆಟ್‌ನಲ್ಲಿ ಗ್ರಾಮೀಣ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮೈಕ್ರೋ ಫೈನಾನ್ಸ್ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಸರ್ಕಾರದ ಅಧೀನ ಸಂಸ್ಥೆ ಮೂಲಕ ಸಾಲ ಸೌಲಭ್ಯ ಒದಗಿಸಬೇಕು. ಕಾವೇರಿ ಅಂತಿಮ ತೀರ್ಪಿನಂತೆ ಹೆಚ್ಚುವರಿ ನದಿ ನೀರಿನ ಬಳಕೆಗೆ ಯೋಜನೆ ರೂಪಿಸಿ, ಕೃಷ್ಣ ಬಿ ಸ್ಕೀಂ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಜೆಟ್‌ನಲ್ಲಿ ಸಣ್ಣ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಕೃಷಿ ಬಲವರ್ಧನೆ ಮಾಡಬೇಕು. ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿರುವ ರೈತ ಬಜೆಟ್ ಹಕ್ಕು ಮಂಡನೆ ಕಿರುಹೊತ್ತಿಗೆಯ ವಿಚಾರವನ್ನು ಬಜೆಟ್‌ನಲ್ಲಿ ಅಳವಡಿಸಬೇಕು ಎಂದು ಆಗ್ರಹಿಸಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…