ಮೈಸೂರು: ರಾಜ್ಯಕ್ಕೆ ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಮತೋಲನದ ಬಜೆಟ್ ಮಂಡಿಸಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಐತಿಹಾಸಿಕ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇದೇ ಮೊದಲ ಬಾರಿಗೆ ಪ್ರವಾಸೋದ್ಯಮ ಅಭಿವೃದ್ದಿಗೆ 8 ಸಾವಿರ ಕೋಟಿ ಮೀಸಲಿರಿಸಿರುವುದು ಬಹಳ ಖುಷಿ ತಂದಿದೆ ಎಂದರು.
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ 500 ಕೋಟಿ, ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ 319 ಕೋಟಿ, ಹೈಟೆಕ್ ಬಸ್ ನಿಲ್ದಾಣಕ್ಕೆ 120 ಕೋಟಿ ರೂ. ಜೊತೆಗೆ ಇನ್ನೂ ಹಲವು ಯೋಜನೆಗಳನ್ನು ಮೈಸೂರಿಗೆ ನೀಡಿರುವುದು ಸಂತಸದ ವಿಷಯ ಎಂದು ತಿಳಿಸಿದರು.
ಆದರೆ, ಬನ್ನಿಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ನಮ್ಮ ವಿರೋಧವಿದೆ. ಅದನ್ನು ಹೊರತು ಪಡಿಸಿ ಈ ಬಜೆಟ್ ಒಂದು ಸಮತೋಲನದ ಬಜೆಟ್ ಎಂದು ಹೇಳಿದ್ದಾರೆ.





