ಮೈಸೂರು: ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ಕರ್ನಾಟಕದ ಮೂಲ ಸೌಕರ್ಯ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿನ್ನಡೆ ಅನುಭವಿಸುತ್ತಿರುವ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ ಬಿಜಯ್ ಕುಮಾರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಪ್ರಥಮವಾಗಿ ರಾಜ್ಯದ ದಲಿತ ಸಮಾಜ ಕಲ್ಯಾಣಕ್ಕಾಗಿ 42,000 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ 45,286 ಕೋಟಿ, ಸಮಗ್ರ ಗ್ರಾಮೀಣ ಅಭಿವೃದ್ಧಿಗೆ 26,735 ಕೋಟಿ, ಕೃಷಿ ವಲಯದ ಮಹತ್ವದ ಉತ್ತೇಜನಕ್ಕೆ ರೂ.7,145 ಕೋಟಿ, ರಾಜ್ಯದ ನೀರಾವರಿ 22,181 ಕೋಟಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉನ್ನತೀಕರಣಕ್ಕೆ 34, 955 ಕೋಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಪ್ರಾಮುಖ್ಯತೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ನಿರಂತರ ಟೀಕೆ ಮಾಡುತ್ತಿದ್ದ ರಾಜ್ಯದ ಹಾಗೂ ದೇಶದ ಬಿಜೆಪಿ ನಾಯಕರಿಗೆ ಈ ಬಜೆಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ ಎಂದರು.
ಹಾಗೆಯೇ, ತನ್ನ ತವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ನೂತನ ಯೋಜನೆಗಳನ್ನು ನೀಡುವ ಮೂಲಕ ತನ್ನ ತಾಯಿ ನೆಲದ ಋಣ ತೀರಿಸಿ ನಂಬಿಕಸ್ಥ ರಾಜಕಾರಣದ ರುಜುವಾತು ಸಾಕ್ಷಿಕರಿಸಿದ್ದಾರೆ ಎಂದರು.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…