ಮೈಸೂರು : ರೈತರ ಕಲ್ಯಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ ರೋಗಕ್ಕೂ ಶನೇಶ್ವರನೇ ಕಾರಣ ಎನ್ನುವಂತೆ ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತಂತ್ರಗಾರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಭಾರತಕ್ಕೆ ವೈಟ್‌ವಾಶ್ ಮುಖಭಂಗ : 2 ದಶಕಗಳ ಬಳಿಕ ಸರಣಿ ಗೆದ್ದ ದ.ಆಫ್ರಿಕಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿಯನ್ನು ಆದ್ಯತಾ ವಲಯವಾಗಿ ಪರಿಗಣಿಸಿದೆ. ಆ ನಿಟ್ಟಿನಲ್ಲಿ ಹಣಕಾಸು ಸಚಿವರು ಬಜೆಟ್‌ನಲ್ಲಿ ಕೃಷಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿದ್ದನ್ನು ಗಮನಿಸಬಹುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದರು.
ಕೃಷಿ ರಾಜ್ಯ ವಿಷಯ : ಕೃಷಿ ರಾಜ್ಯ ವಿಷಯವಾಗಿದ್ದು, ರೈತರನ್ನು ರಕ್ಷಿಸಬೇಕಾದ ಹೊಣೆ ರಾಜ್ಯಸರ್ಕಾರಕ್ಕೆ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಕೃಷಿ ಅಭಿವೃದ್ಧಿಗೆ ಗಮನವನ್ನೇ ಕೊಡುತ್ತಿಲ್ಲ.ಅತಿವೃಷ್ಟಿಯಿಂದಾಗಿ ಏಕದಳ, ದ್ವಿದಳ, ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ನಿಯಮಗಳ ಅನುಸಾರವಾಗಿ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಸರಿಯಾಗಿ ಸಮೀಕ್ಷೆ ನಡೆಸಿ ವರದಿ ಕಳುಹಿಸಿಲ್ಲ. ಜತೆಗೆ ಎಸ್‌ಡಿಆರ್‌ಎಫ್ ಅಡಿಯಲ್ಲಿ ನೀಡಬೇಕಿರುವ ಪರಿಹಾರವನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ರಾಜ್ಯಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ಕಿರಣ್ ಜಯರಾಮೇಗೌಡ, ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಚ್.ಜಿ.ಗಿರಿಧರ್, ಸಂತೋಷ್ ಕುಮಾರ್ ಹಾಜರಿದ್ದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…