ಮೈಸೂರು: ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕಾರ್ಯಕ್ಕೆ ಮುಂದಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ರಘು ಕೌಟಿಲ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ: ಅರಮನೆಗಿಂತ ಹೆಚ್ಚು ಅರಳಿಮರದಡಿ ಜೀವಿಸುವ ಧಮ್ಮ
ಈ ಕುರಿತು ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಾತಿ ಗಣತಿ ನಡೆಸಲು ಅಗತ್ಯ ಪ್ರಕಟಣೆ ಹೊರಡಿಸಿದೆ. 1400 ಜಾತಿಗಳ ಸಮೀಕ್ಷೆ ಮಾಡಲು ಮುಂದಾಗಿದೆ. ಅದರಲ್ಲಿ 50ಕ್ಕೂ ಹೆಚ್ಚು ಜಾತಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಲಿಂಗಾಯತ ಕ್ರೈಸ್ತ, ಒಕ್ಕಲಿಗ ಕ್ರೈಸ್ತ, ಕುರುಬ ಕ್ರೈಸ್ತ, ನೇಕಾರ ಕ್ರೈಸ್ತ, ಮಡಿವಾಳ ಕ್ರೈಸ್ತ, ಬಿಲ್ಲವ ಕ್ರೈಸ್ತ, ಕುಂಬಾರ ಕ್ರೈಸ್ತ, ಮಾದಿಗ ಕ್ರೈಸ್ತ ,ಬಂಜಾರ ಕ್ರೈಸ್ತ ಹೀಗೆ ಹೊಸ ಜಾತಿಗಳನ್ನು ಹುಟ್ಟು ಹಾಕುವ ಮುಖಾಂತರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲು ಮುಂದಾಗಿದೆ. ಕ್ರೈಸ್ತ ಹೆಸರಿನಲ್ಲಿ ಮತಾಂತರ ಮಾಡಿ ಜಾತಿಗಳನ್ನು ಹೊಡೆಯುವ ಕಾರ್ಯಕ್ಕೆ ಮುಂದಾಗಿದೆ. ಸಾಮಾಜಿಕ ಜಾತಿಗಳ ಸಮೀಕ್ಷೆಯಲ್ಲಿ ಮತಾಂತರ ಭಾಗ್ಯವನ್ನು ರಾಜ್ಯ ಸರ್ಕಾರ ನೀಡಲು ಮುಂದಾಗಿದೆ. ಕೂಡಲೇ ಹಿಂದುಳಿದ ವರ್ಗಗಳ ಆಯೋಗ ಸೇರಿಸಿರುವ ನೂತನ ಜಾತಿಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…