ಮೈಸೂರು : ನಗರದ ಕಲಾಮಂದಿರದಲ್ಲಿ ಆ.10 ರಂದು ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸಲಾಗುವುದು ಎಂದು ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಜೀವಿಕ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಗಾಂಧಿನಗರದ ಉರಿಲಿಂಗಿ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಂಸದ ಸುನಿಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ, ವಿಧಾನಸಭಾ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್‌ಕುಮಾರ್, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
‘ಜೀತ ಸಮಸ್ಯೆ ಒಳನೋಟ’ ಕುರಿತು ಜೀವಿಕ ಸಂಸ್ಥಾಪಕ ಡಾ.ಕಿರಣ್ ಕಮಲ್ ಪ್ರಸಾದ್, ರಾಜ್ಯ ಸಂಘಟನಾ ಸಂಚಾಲಕ ಬಿ.ಉಮೇಶ ನೂರಲಕುಪ್ಪೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಿಲ್ಲಾ ಸಂಚಾಲಕ ಬಸವರಾಜು ಮನವಿ ಸಲ್ಲಿಸಲಿದ್ದಾರೆ. ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮಹದೇವು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ಮಹದೇವ, ಜಿಲ್ಲಾ ಸಂಚಾಲಕ ಜೀವಿಕ ಬಸವರಾಜು, ತಾಲ್ಲೂಕು ಸಂಚಾಲಕ ಚಂದ್ರಶೇಖರ್ ಮೂರ್ತಿ, ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಗಣೇಶ್ ಕೆ.ಎಡತೊರೆ, ಸರಗೂರು ತಾಲ್ಲೂಕು ಅಧ್ಯಕ್ಷ ಬಸವರಾಜು ತೆಲಗುಮಸಹಳ್ಳಿ, ಜಾಗೃತಿ ಸಮಿತಿ ಸದಸ್ಯ ಶಿವಣ್ಣ ಯಲಮತ್ತೂರು ಉಪಸ್ಥಿತರಿದ್ದರು.





