ಮೈಸೂರು ನಗರ

ಆ.10ಕ್ಕೆ ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ

ಮೈಸೂರು : ನಗರದ ಕಲಾಮಂದಿರದಲ್ಲಿ ಆ.10 ರಂದು ಜೀತ ವಿಮುಕ್ತರ ರಾಜ್ಯಮಟ್ಟದ ಸಮಾವೇಶ ಹಾಗೂ ಒಕ್ಕೂಟದ ಚುನಾವಣೆಯನ್ನು ನಡೆಸಲಾಗುವುದು ಎಂದು ಜೀತ ವಿಮುಕ್ತಿ ಕರ್ನಾಟಕ ಹಾಗೂ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಜೀವಿಕ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಗಾಂಧಿನಗರದ ಉರಿಲಿಂಗಿ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಂಸದ ಸುನಿಲ್ ಬೋಸ್, ಶಾಸಕರಾದ ಅನಿಲ್ ಚಿಕ್ಕಮಾದು, ಕೆ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ, ವಿಧಾನಸಭಾ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್‌ಕುಮಾರ್, ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

‘ಜೀತ ಸಮಸ್ಯೆ ಒಳನೋಟ’ ಕುರಿತು ಜೀವಿಕ ಸಂಸ್ಥಾಪಕ ಡಾ.ಕಿರಣ್ ಕಮಲ್ ಪ್ರಸಾದ್, ರಾಜ್ಯ ಸಂಘಟನಾ ಸಂಚಾಲಕ ಬಿ.ಉಮೇಶ ನೂರಲಕುಪ್ಪೆ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಜಿಲ್ಲಾ ಸಂಚಾಲಕ ಬಸವರಾಜು ಮನವಿ ಸಲ್ಲಿಸಲಿದ್ದಾರೆ. ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಮಹದೇವು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಮಹದೇವ, ಜಿಲ್ಲಾ ಸಂಚಾಲಕ ಜೀವಿಕ ಬಸವರಾಜು, ತಾಲ್ಲೂಕು ಸಂಚಾಲಕ ಚಂದ್ರಶೇಖರ್ ಮೂರ್ತಿ, ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಗಣೇಶ್ ಕೆ.ಎಡತೊರೆ, ಸರಗೂರು ತಾಲ್ಲೂಕು ಅಧ್ಯಕ್ಷ ಬಸವರಾಜು ತೆಲಗುಮಸಹಳ್ಳಿ, ಜಾಗೃತಿ ಸಮಿತಿ ಸದಸ್ಯ ಶಿವಣ್ಣ ಯಲಮತ್ತೂರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

4 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

36 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

45 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

47 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

52 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

1 hour ago