Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಡಿಸೆಂಬರ್.‌23ರಂದು ರಾಜ್ಯಮಟ್ಟದ ರೈತರ ಸಮಾವೇಶ

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.‌13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ.

ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಈವರೆಗೆ ಪೂರ್ವಭಾವಿಯಾಗಿ ನಡೆದ ಸಭೆಗಳಲ್ಲಿ ಒಂದಷ್ಟು ಗಂಭೀರ ವಿಚಾರಗಳನ್ನು ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಸಮಾವೇಶವನ್ನು ಮಂಡಿಸಲು ನಿರ್ಧರಿಸಲಾಗಿದೆ.

ರೈತರು ಸ್ವಾಭಿಮಾನಿಗಳಾಗಿ ಸ್ವಯಂ ಪ್ರೇರಿತರಾಗಿ ರೈತರ ಹಬ್ಬ ಆಚರಿಸಲು ಮೈಸೂರಿಗೆ ಬರಬೇಕು. ರೈತರ ಕೂಗನ್ನು ಸರ್ಕಾರಕ್ಕೆ ಮುಟ್ಟಿಸಲು ಇದು ಸರಿಯಾದ ಸಮಯ ಆಗಿದೆ ಎಂದರು.

ರೈತರು ಏನೇ ಸಮಸ್ಯೆಗಳಿದ್ದರೂ ಈ ಸಮಾವೇಶಕ್ಕೆ ಬಂದು ಚರ್ಚೆ ನಡೆಸಬೇಕು. ಈ ಮೂಲಕ ಸರ್ಕಾರಗಳಿಗೆ ರೈತರಿಗಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿ ಹೇಳಬೇಕು ಎಂದು ಸಲಹೆ ನೀಡಿದರು.

Tags: