State police have failed in detecting criminal cases: BJP spokesperson M.G. Mahesh
ಮೈಸೂರು: ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಎಂಡಿಎಂಎ ಮಾದಕ ಪದಾರ್ಥ ತಯಾರಿಕಾ ಘಟಕ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹ ಇಲಾಖೆ ಏನು ಮಾಡ್ತಿದೆ?, ಗೃಹ ಸಚಿವರು ಏನು ಮಾಡ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. ಮೈಸೂರಿನಲ್ಲಿ ಎಂಡಿಎಂಎ ತಯಾರಿಸುತ್ತಿದ್ದ ಘಟಕವನ್ನು ಮಹಾರಾಷ್ಟ್ರದ ಪೊಲೀಸರು ಬಂದು ಪತ್ತೆ ಹಚ್ಚಿದ್ದಾರೆ. ಹಾಗಾದರೆ ಮೈಸೂರಿನ ಪೊಲೀಸರು ಏನು ಮಾಡ್ತಿದ್ರು. ಇವರೇನು ಕತ್ತೆ ಕಾಯ್ತಿದ್ರಾ? ಇಲ್ಲಿನ ಅಕ್ರಮ ಬಯಲಿಗೆಳೆಯಲು ಮಹಾರಾಷ್ಟ್ರದ ಪೊಲೀಸರು ಬರಬೇಕಾಯ್ತು. ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಎನ್ಐಎ ತಂಡ ಪತ್ತೆ ಮಾಡಿದೆ. ರಾಜ್ಯದ ಹಲವಾರು ಕಡೆ ನಡೆಯುತ್ತಿದ್ದ ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯದ ಪೊಲೀಸರ ವಿರುದ್ಧ ಕಿಡಿಕಾರಿದರು.
ಇನ್ನು ಮೈಸೂರಿನ ಎನ್.ಆರ್.ಕ್ಷೇತ್ರದಲ್ಲಿ ಮಾದಕ ಪದಾರ್ಥಗಳ ಅಕ್ರಮ ಮಾರಾಟದ ಬಗ್ಗೆ ಸ್ಥಳೀಯ ಶಾಸಕ ತನ್ವೀರ್ ಸೇಠ್ ಕಳವಳ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ತನ್ವೀರ್ ಸೇಠ್ ಸತತವಾಗಿ ಎನ್.ಆರ್.ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ. ಆ ಕ್ಷೇತ್ರದಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳಿಗೆ ತನ್ವೀರ್ ಸೇಠ್ ನೈತಿಕವಾಗಿ ಹೊಣೆ ಹೊರಬೇಕು. ಕೇವಲ ಕಳವಳ ವ್ಯಕ್ತಪಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ತನ್ವೀರ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…