ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್‌ಗಳು ಬೆಳ್ಳಂಬೆಳಿಗ್ಗೆ ಡಿಪೋಗಳತ್ತ ತೆರಳಿದವು. ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಹಾಗೂ ನಗರ ಬಸ್ ನಿಲ್ದಾಣಗಳು ಬಸ್‌ಗಳಿಲ್ಲದೇ ಖಾಲಿ ಖಾಲಿಯಾಗಿದ್ದು, ಪ್ರಯಾಣಿಕರು ಖಾಸಗಿ ಬಸ್‌ಗಳಲ್ಲಿ ತೆರಳುತ್ತಿದ್ದಾರೆ.
ಮೈಸೂರಿನಲ್ಲಿ ಸಾರ್ವಜನಿಕರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಇನ್ನು ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಸೇರಿದಂತೆ ರಾಜ್ಯಾದ್ಯಂತ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ದೂರದ ಊರಿಗೆ ತೆರಳಲು ಜನರು ತೀವ್ರ ಪರದಾಟ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧವೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ.





