ಮೈಸೂರು ನಗರ

ರಾಜ್ಯಾದ್ಯಂತ ಸಾರಿಗೆ ಮುಷ್ಕರ: ಮೈಸೂರಿನಲ್ಲಿ ಪ್ರಯಾಣಿಕರ ಪರದಾಟ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್‌ಗಳು ಬೆಳ್ಳಂಬೆಳಿಗ್ಗೆ ಡಿಪೋಗಳತ್ತ ತೆರಳಿದವು. ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಹಾಗೂ ನಗರ ಬಸ್‌ ನಿಲ್ದಾಣಗಳು ಬಸ್‌ಗಳಿಲ್ಲದೇ ಖಾಲಿ ಖಾಲಿಯಾಗಿದ್ದು, ಪ್ರಯಾಣಿಕರು ಖಾಸಗಿ ಬಸ್‌ಗಳಲ್ಲಿ ತೆರಳುತ್ತಿದ್ದಾರೆ.

ಮೈಸೂರಿನಲ್ಲಿ ಸಾರ್ವಜನಿಕರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇನ್ನು ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಸೇರಿದಂತೆ ರಾಜ್ಯಾದ್ಯಂತ ಬಸ್‌ ಸಂಚಾರ ಸಂಪೂರ್ಣ ಬಂದ್‌ ಆಗಿದ್ದು, ದೂರದ ಊರಿಗೆ ತೆರಳಲು ಜನರು ತೀವ್ರ ಪರದಾಟ ನಡೆಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧವೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago