ಮೈಸೂರು ನಗರ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್‌ಗಳ ದರ್ಬಾರ್‌

ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು ಶಾಲೆಗೆ ಹೋಗದೇ ಮನೆಯಲ್ಲಿ ಉಳಿದಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಂದು ಖಾಸಗಿ ಬಸ್‌ಗಳು ರಸ್ತೆಗಿಳಿದಿದೆ. ಖಾಸಗಿ ಬಸ್ಸುಗಳಲ್ಲಿ ಜನರು ಪ್ರಯಾಣ ಬೆಳೆಸುತ್ತಿದ್ದು, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಸಾರಿಗೆ ನೌಕರರು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇನ್ನಾದರೂ ಈ ಬಗ್ಗೆ ಕ್ರಮ ಕೈಗೊಂಡು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸುತ್ತಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಆಂದೋಲನ ಡೆಸ್ಕ್

Recent Posts

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

1 hour ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

1 hour ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

2 hours ago

400 ಕೋಟಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳ ಹೈಜಾಕ್‌ : ಚೋರ್ಲಾ ಘಾಟ್‌ನಲ್ಲಿ ನಡೆದ ದರೋಡೆ ಬಗ್ಗೆ ಎಸ್‌ಪಿ ಹೇಳಿದ್ದಿಷ್ಟು

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್​​ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ…

2 hours ago

ಮೂವರು ಕನ್ನಡಿಗರು ಸೇರಿದಂತೆ 45 ಮಂದಿಗೆ ಪದ್ಮಶ್ರೀ ಗೌರವ

ಮೂವರು ಕನ್ನಡಿಗರಿವರು ; ಮಂಡ್ಯದ ಅಂಕೇಗೌಡ, ದಾವಣಗೆರೆಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಎಸ್.ಜಿ. ಸುಶೀಲಮ್ಮ ಬೆಂಗಳೂರು : ದೇಶದ…

3 hours ago

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

5 hours ago