ಮೈಸೂರು ನಗರ

ಮೈಸೂರು| ಎಲ್ಲಾ ಹಾಡಿಗಳಿಗೆ ವಿದ್ಯುತ್ ಪೂರೈಸಲು ಕ್ರಮ: ರಮೇಶ್ ಬಂಡಿಸಿದ್ದೇಗೌಡ

ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಬಗೆಹರಿಸುವುದಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹೇಳಿದ್ದಾರೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ಆನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಹಂತದಲ್ಲಿ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.

ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ಮಾತನಾಡಿ, ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್‌ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್‌ ಪೂರೈಸಲು ಯಾವುದೇ ಸರ್ಕಾರ 42 ಕೋಟಿ ರೂ.ಗಳನ್ನು ಖರ್ಚು ಮಾಡುವುದು ತೀರಾ ವಿರಳ. ಆದರೆ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಆದಾಯದ ಬಗ್ಗೆ ಯಾವುದೇ ವಿಳಂಬ ಮಾಡದೆ, ಮೂಲಭೂತ ಹಕ್ಕು ಎಂದು ಪರಿಗಣಿಸಿ ವಿದ್ಯುತ್‌ ಪೂರೈಸಲು ಒಪ್ಪಿಗೆ ನೀಡಿದರು. ಆದರೆ, ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಉಳಿದಂತೆ ಜಿಲ್ಲೆಯಲ್ಲಿ ಗೃಹಜ್ಯೋತಿ, ಗಂಗಾ ಕಲ್ಯಾಣ, ಕುಸುಮ್‌-ಬಿ, ಕುಸುಮ್‌-ಸಿ ಯೋಜನೆಗಳ ಅನುಷ್ಠಾನ ಸೇರಿದಂತೆ ಸೆಸ್ಕ್‌ ವತಿಯಿಂದ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕೆಲಸಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

11 hours ago