ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಇದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಕಿಡಿಕಾರಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ.
ಪೋಸ್ಟ್ ನೋಡುತ್ತಿದ್ದಂತೆ ರೊಚ್ಚಿಗೆದ್ದ ಅನ್ಯಕೋಮಿನ ಯುವಕರು ಉದಯಗಿರಿ ಪೊಲೀಸ್ ಠಾಣೆ ಮುಂದೆ ಕಲ್ಲು ತೂರಾಟ ನಡೆಸಿದ್ದಲ್ಲದೇ, ಹಲವು ಪೊಲೀಸರ ಮೇಲೂ ದಾಳಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ. ಪುಂಡರು ಪೊಲೀಸ್ ಠಾಣೆ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರನ್ನೇ ಗುರಿಯಾಗಿಸಿ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಹಲವು ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲ್ಲು ತೂರಾಟ ನಡೆಸಿರುವ ಕಿಡಿಗೇಡಿಗಳನ್ನು ಆದಷ್ಟು ಬೇಗ ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬಿಜೆಪಿ ಶಾಸಕ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ…
ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ…
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ಶೀಘ್ರದಲ್ಲೇ ಹೊಸ ನೀತಿಯನ್ನು ಪ್ರಕಟಿಸಲಿದೆ ಎಂದು ಕೇಂದ್ರ ಸಚಿವ ನಿತಿನ್…
ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ…
ನವದೆಹಲಿ: ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್.ಡಿ.ದೇವೇಗೌಡ ಅವರು ಭಾರತದ ಆರೋಗ್ಯ ವ್ಯವಸ್ಥೆ ಬಲಪಡಿಸಲು ಕರೆ ನೀಡಿದ್ದಾರೆ. ಈ…
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.…