ಮೈಸೂರು: ರಾಜ್ಯ ಹಾಗೂ ದೇಶದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಟಾಪ್ ವೋಟ್ ಚೋರಿ ಅಭಿಯಾನವನ್ನು ಆರಂಭಿಸಿದೆ.
ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು, ಸ್ಟಾಪ್ ವೋಟ್ ಚೋರಿ ಅಭಿಯಾನವನ್ನು ಆರಂಭಿಸಿದ್ದು, ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರಿ ಬಸ್ಸುಗಳಿಗೆ ಸ್ಟಿಕ್ಕರ್ ಅಂಟಿಸಿ ಅಭಿಯಾನ ಶುರು ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ವೋಟ್ ಚೋರಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಭಿಯಾನದಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿ, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.





