ಮೈಸೂರು: ನಗರದ ಹೃದಯ ಭಾಗದಲ್ಲಿರುವ ಸಬರ್ಬನ್ ಬಸ್ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡುವುದಕ್ಕೆ ನಗರದ ಜನತೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರು ಕೆಎಸ್‌ಆರ್‌ಟಿಸಿ ಸಬರ್ನ್ ಬಸ್ ನಿಲ್ದಾಣ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಸಬರ್ಬನ್ ಬಸ್ ನಿಲ್ದಾಣ, ಮೈಸೂರು ನಗರಕ್ಕೆ ಒಂದು ರೀತಿಯ ಕಳಸಪ್ರಾಯದಂತೆ ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು. ಒಂದು ವೇಳೆ ಸ್ಥಳಾಂತರ ಮಾಡಿದರೆ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತದೆ. ಸಿಟಿ ಸೆಂಟರ್‌ನಲ್ಲಿರುವುದರಿಂದ ಎಲ್ಲದಕ್ಕೂ ಅನುಕೂಲವಾಗಿದೆ.
ಈಗಾಗಲೇ ನರ್ಮ್ ಯೋಜನೆಯಡಿ ಸಾತಗಳ್ಳಿ, ನಾಯ್ಡು ನಗರ, ಇಲವಾಲ, ಕುವೆಂಪು ನಗರ ಬಸ್ ಡಿಪೋ ಬಳಿ ನಿರ್ಮಾಣ ಮಾಡಿದ ಬಸ್ ನಿಲ್ದಾಣ ಎಲ್ಲವೂ ಕೂಡ ನಿಷ್ಕ್ರೀಯಗೊಂಡಿದ್ದು, ನೂರಾರು ಕೋಟಿ ವೆಚ್ಚ ಮಾಡಿ ನಿರ್ಮಿಸಿದ ನಿಲ್ದಾಣಗಳು ನಿರುಪಯುಕ್ತವಾಗಿವೆ. ಈಗ ಈ ನಿಲ್ದಾಣವನ್ನು ಬನ್ನಿಮಂಟಪಕ್ಕೆ ಸ್ಥಳಾಂತರ ಮಾಡಿದರೆ ಇದರ ಬಳಕೆಯು ಕಡಿಮೆಯಾಗಬಹುದು.
ದಸರಾ ಸಂದರ್ಭದಲ್ಲಿ ಮಾತ್ರ ಸ್ವಲ್ಪ ತೊಂದರೆಯಾಗುತ್ತದೆ. ಉಳಿದ ಸಂದರ್ಭದಲ್ಲಿ ಏನೂ ಸಮಸ್ಯೆ ಅಗುವುದಿಲ್ಲ. ಸ್ಥಳಾಂತರ ಮಾಡುವ ಬದಲು ಪಕ್ಕದಲ್ಲೇ ಇರುವ ಪೀಪಲ್ಸ್ ಪಾರ್ಕ್ ಮತ್ತು ಸರ್ಕಾರಿ ಗೆಸ್ಟ್ ಹೌಸ್ ಜಾಗವನ್ನು ಪಡೆದು ವಿಸ್ತರಿಸಬಹುದು. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವರಿಗೂ ಮನವಿ ಮಾಡಿದ್ದೇವೆ. ಮನವಿಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ರವಿಶಾಸ್ತ್ರಿ, ಉಪಾಧ್ಯಕ್ಷ ನಿಂಗರಾಜು, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಅದ್ಯಕ್ಷ ಬಿಎಸ್ ಪ್ರಶಾಂತ್ ಸೇರಿದಂತೆ ಹಲವರು ಹಾಜರಿದ್ದರು.
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…