ಮೈಸೂರು ನಗರ

ವಿದ್ಯಾರ್ಥಿನಿಯರ ಸಾವು ಪ್ರಕರಣ : ಮೃತ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಣೆ

ಮೈಸೂರು : ನಗರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಮಂಗಳೂರಿನ ರೆಸಾರ್ಟ್ ಒಂದರ ಈಜು ಕೊಳದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಲಾ 2 ಲಕ್ಷ ರೂ.ನಂತೆ 6 ಲಕ್ಷ ರೂ. ಪರಿಹಾರದ ಮಂಜೂರಾತಿ ಪತ್ರ ವಿತರಿಸಿದ್ದಾರೆ.

ನಗರದ ವಿಜಯನಗರದ ಎಸ್.ನವೀನ್ ಕುಮಾರ್ ಪುತ್ರಿ ಎನ್.ಕೀರ್ತನಾ(21),ಮಲ್ಲೇಶ್ ಪುತ್ರಿ ಕುರುಬಾರಳ್ಳಿಯ ನಿಶಿತಾ(21), ರಾಮಾನುಜ ರಸ್ತೆಯ ಎಸ್.ಎಂ.ಎನ್ ಶ್ರೀನಿವಾಸ್ ಪುತ್ರಿ ಪಾರ್ವತಿ(20) ನೀರಿನಲ್ಲಿ ಮುಳುಗಿ ಮೃತರಾಗಿದ್ದರು. ಈ ಸಂಬಂಧ ಮಂಗಳೂರಿನ ಉಲ್ಲಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂರು ವಿದ್ಯಾರ್ಥಿಗಳು ಅತ್ಯಂತ ಕಡುಬಡತನದ ಕುಟುಂಬದವರಾಗಿದ್ದರು, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕೂಲಿ ಮಾಡಿ ಪೋಷಕರು ಇಂಜಿನಿಯರಿಂಗ್ ಶಿಕ್ಷಣ ಕೊಡಿಸಿದ್ದರು. ಪರೀಕ್ಷೆ ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ರೆಸಾರ್ಟ್ ಒಂದರ ಈಜು ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಸರ್ಕಾರದ ವತಿಯಿಂದ ಮೂರು ಹೆಣ್ಣು ಮಕ್ಕಳ ಕುಟುಂಬಗಳಿಗೆ ತಲಾ 2 ಲಕ್ಷದಂತೆ ಒಟ್ಟು 6ಲಕ್ಷ ಹಣ ಪರಿಹಾರ ಘೋಷಿಸಲಾಗಿತ್ತು. ಅದರ ಮಂಜೂರು ಹಣದ ಪತ್ರವನ್ನು ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಅವರು ಗೃಹ ಕಚೇರಿ ಜನನಿಯಲ್ಲಿ ವಿತರಣೆ ಮಾಡಿದ್ದಾರೆ. ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು ರೆಸಾರ್ಟ್ ವಿರುದ್ಧ ಪೋಷಕರು ಮೊಕದ್ದಮೆ ಹೂಡಿದ್ದು, ನಾನು ಸಹ ವಕೀಲರ ಜೊತೆ ಮಾತನಾಡಿದ್ದೇನೆ. ಘಟನೆ ರೆಸಾರ್ಟ್ ಅವರ ಅಜಾಗೂರಕತೆಯಿಂದಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು ನ್ಯಾಯ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಹೊಂಡದಲ್ಲಿ ಈಜು ಹೊಡೆಯಲು ಹೋಗಿ ಬಿದ್ದು ಮಕ್ಕಳು ಸಾವನ್ನಪ್ಪುತಿದ್ದಾರೆ. ಕಾಲುವೆಗಳಲ್ಲಿ, ಕೆರೆಗಳು, ಕಾಮಗಾರಿ ನೆಡೆಯುವ ಕಟ್ಟಡಗಳ ಸಂಪ್‌ಗಳಲ್ಲಿ ಬಿದ್ದು ಸಾವನ್ನಪ್ಪುವಂತಹ ದುರ್ಘಟನೆಗಳು ನಡೆಯುತ್ತಿವೆ. ಪೋಷಕರು ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸಬೇಕು ಇಂತಹ ಘಟನೆಗಳು ಆಗದಂತೆ ಜಾಗೃತವಹಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ಆಶ್ರಯ ಸಮಿತಿ ಸದಸ್ಯರಾದ ಗುಣಶೇಖರ್, ಸೋಮು ಕುರುಬಾರಳ್ಳಿ, ಹರೀಶ್ ಗಂಧನಹಳ್ಳಿ, ನಾಗಮಹದೇವ, ಅವಿನಾಶ್‌ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

18 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

1 hour ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

1 hour ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago