ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಹೇಳಿದರು.
ಇಂದು(ಫೆ.21) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತ ಇಲಾಖೆ, ಮೈಸೂರು ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ವಿದ್ಯಾರ್ಥಿಗಳ ನಿಲಯಗಳ ವಿದ್ಯಾರ್ಥಿಗಳಿಗೆ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಕಲಾ ತರಬೇತಿ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂಗೀತ ನಾಟಕ, ಕ್ರೀಡೆ, ಇವುಗಳಿಗೆ ಯಾವುದೇ ಜಾತಿ ಬೇದ ಇಲ್ಲ. ಧರ್ಮತೀತವಾಗಿ ಎಲ್ಲವನ್ನು ಮೀರಿ ಬೆಳೆದು ಬಂದಿರುವಂತಹದ್ದು. ಈ ಕಲೆಯನ್ನು ಓದುವ ಜೊತೆಯಲ್ಲಿ ಮೈಗೂಡಿಸಿಕೊಳ್ಳಿ. ಬಾಲ್ಯದಿಂದ ಪ್ರೌಢ ವ್ಯವಸ್ಥೆಗೆ ಬರುವ ಮಕ್ಕಳು ಮನಸ್ಸನ್ನು ಬೇರೆ ಕಡೆ ಚಂಚಲಗೊಳಿಸದೆ ಓದಿನ ಕಡೆ ಕೇಂದ್ರೀಕರಿಸಬೇಕು ಯಾವುದೇ ಆಕರ್ಷಣೆಗೆ ಒಳಗಾಗಬೇಡಿ. ಒಳ್ಳೆಯ ಸಂಸ್ಕಾರ, ಸಂಸ್ಕೃತಿಯನ್ನು ಪ್ರತಿಯೊಂದು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತರಬೇತುದಾರ ದೇವನಂದ ವರಪ್ರಸಾದ್ ಮಾತನಾಡಿ, ಜಾನಪದ ಕಲೆಯು ಒಬ್ಬರಿಂದ ಒಬ್ಬರು ಕೇಳಿ ಹಾಡುವುದರ ಮೂಲಕ ಬೆಳೆದು ಬಂದಿದೆ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಲೆಯ ಬಗ್ಗೆ ತರಬೇತಿ ನೀಡಲು ಇಲಾಖೆಗಳು ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಹಾಸ್ಟಲ್ ವಿದ್ಯಾರ್ಥಿಗಳಿಗೆ ಸರಿಯಾದ ತರಬೇತಿ ಸಿಕ್ಕರೆ ಮಕ್ಕಳು ಮುಂದೆ ಬೆಳೆಯುತ್ತಾರೆ. ಕಲಾ ತರಬೇತಿಯಂತಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಂಡರೆ ಜೀವನದಲ್ಲಿ ಮುಂದೆ ಬರಲು ಸಹಾಯಕ ಆಗಲಿದೆ ಕಲೆಗಳನ್ನು ಕಲಿತಾಗ ತನ್ನಲ್ಲಿನ ಚೈತನ್ಯ ಹೊರ ಬರುತ್ತದೆ ಎಂದು ಹೇಳಿದರು.
ತರಬೇತಿ ಪಡೆದ ವಿದ್ಯಾರ್ಥಿನಿ ಸಾಕ್ಷಿ ಮಾತನಾಡಿ, ಕಲೆ ಬಗ್ಗೆ ಹೆಚ್ಚಿನ ಮತ್ತು ಸಂಸ್ಕೃತಿ ಬಗ್ಗೆ ನಮಗೆ ಯಾವುದೇ ಜ್ಞಾನ ಇರಲಿಲ್ಲ ನೃತ್ಯ, ಸಂಗೀತ,ವೀರಗಾಸೆ ಬಗ್ಗೆ ತರಬೇತಿ ನೀಡಿದ್ದರೆ. ಸಮಾಜದಲ್ಲಿ ಶಿಸ್ತಿನಿಂದ ಹೇಗಿರಬೇಕು, ಹೇಗೆ ವರ್ತಿಸಬೇಕು ಎಂದು ತಿಳಿಸಿಕೊಟ್ಟಿದ್ದಾರೆ. ಧೈರ್ಯ ತುಂಬಿ ವೇದಿಕೆಯ ಮೇಲೆ ಪ್ರದರ್ಶನ ನೀಡುವಂತೆ ತರಬೇತಿ ನೀಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ ಸುದರ್ಶನ್,ನಿಲಯ ಪಾಲಕರಾದ ಮೋಹನ ಕುಮಾರಿ ಕೆ. ಎಸ್ ಉಪಸ್ಥಿತರಿದ್ದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…