ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ ನೆರವೇರಿಸಿದರು.
ಇದನ್ನು ಓದಿ: ಕೊಡಗು| ಡಿಸೆಂಬರ್.4ರಂದು ಕೊಡಗಿನಲ್ಲಿ ಪುತ್ತರಿ ಹಬ್ಬ
ವಿಶ್ವೇಶ್ವರನಗರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ವಿದ್ಯಾರಣ್ಯಪುರಂನ ಬೂತಾಳೆ ಮೈದಾನ, ದಿವಾನ್ಸ್ ರಸ್ತೆಯಲ್ಲಿರುವ ಅಮೃತೇಶ್ವರ ದೇವಾಲಯ, ಅಗ್ರಹಾರ ಗಣಪತಿ ದೇವಾಲಯ, ಕೆ.ಜಿ.ಕೊಪ್ಪಲಿನ ಬಂದಂತಮ್ಮ ದೇವಾಲಯ ಸೇರಿದಂತೆ ವಿವಿಧ ಬಡಾವಣೆಗಳಲ್ಲಿಯೂ ಭಕ್ತರು ಹುತ್ತ ಹಾಗೂ ನಾಗರಕಲ್ಲಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು.




