ಮೈಸೂರು ನಗರ

ಶಸ್ತ್ರಚಿಕಿತ್ಸೆಗೆ ಒಪ್ಪಿಗೆ ನೀಡಿದ ದರ್ಶನ್‌: ಸಂಕ್ರಾಂತಿ ವೇಳೆಗೆ ನಟನಿಗೆ ಆಪರೇಷನ್‌

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಆಪರೇಷನ್‌ ಮಾಡಿಸಿಕೊಳ್ಳಲು ದರ್ಶನ್‌ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಂಕ್ರಾಂತಿ ಹಬ್ಬದ ವೇಳೆಗೆ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದರ್ಶನ್‌ಗೆ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಈ ಬಗ್ಗೆ ವೈದ್ಯರಾದ ಡಾ.ಅಜಯ್‌ ಹೆಗ್ಡೆ ಎಂಬುವವರು ಮಾಹಿತಿ ನೀಡಿದ್ದಾರೆ.

ದರ್ಶನ್‌ ಆಪರೇಷನ್‌ ಮಾಡಿದ ಒಂದೂವರೆ ತಿಂಗಳುಗಳ ಕಾಲ ಸಿನಿಮಾದ ಶೂಟಿಂಗ್‌ನಲ್ಲಿ ಫೈಟ್‌ ದೃಶ್ಯದಲ್ಲಿ ಭಾಗಿಯಾಗುವಂತಿಲ್ಲ. ಕೇವಲ ಚಿತ್ರೀಕರಣದಲ್ಲಿ ಮಾತ್ರ ಭಾಗಿಯಾಗಬಹುದು ಎಂದು ಹೇಳಲಾಗುತ್ತಿದೆ.

ಇನ್ನು ಮುಂದಿನ ಫೆಬ್ರವರಿ ತಿಂಗಳಿನಲ್ಲಿ ದರ್ಶನ್‌ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಶೂಟಿಂಗ್‌ಗೂ ಮುನ್ನವೇ ಆಪರೇಷನ್‌ ಮಾಡಿಸಿಕೊಳ್ಳಲು ನಿರ್ಧಾರ ಮಾಡಿದ್ದಾರೆ. ಇನ್ನು ಆಪರೇಷನ್‌ ಬಳಿಕ ಮೂರು ದಿನ ಸಂಪೂರ್ಣ ವಿಶ್ರಾಂತಿಯಲ್ಲಿರಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಐದು ತಿಂಗಳಿಗೂ ಹೆಚ್ಚು ಕಾಲಿ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್‌ ತೀವ್ರ ಬೆನ್ನನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮಧ್ಯಂತರ ಜಾಮೀನು ನೀಡಿತ್ತು. ಬಳಿಕ ಒಂದೂವರೆ ತಿಂಗಳ ಕಾಲ ಆಸ್ಪತ್ರೆ ಹಾಗೂ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ದರ್ಶನ್‌, ರೆಗ್ಯುಲರ್‌ ಜಾಮೀನು ನೀಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಹೈಕೋರ್ಟ್‌ ನಟ ದರ್ಶನ್‌ಗೆ ರೆಗ್ಯುಲರ್‌ ಜಾಮೀನು ನೀಡಿತ್ತು. ಈಗ ದರ್ಶನ್‌ ಶೂಟಿಂಗ್‌ನಲ್ಲಿ ಭಾಗಿಯಾಗಬೇಕಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರಲ್ಲಿ ಮತ್ತೊಂದು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : ಎನ್‌ಸಿಬಿ ಅಧಿಕೃತ ಮಾಹಿತಿ

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…

9 mins ago

ಸ್ವತಃ ಎದೆಗೆ ಗುಂಡಿಟ್ಟುಕೊಂಡ ಸಿ.ಜೆ.ರಾಯ್ :‌ ಮರಣೋತ್ತರ ಪರೀಕ್ಷೆಯಲ್ಲಿ ಧೃಢ

ಬೆಂಗಳೂರು: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್‌ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…

1 hour ago

ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು ವಿಧಾನಪರಿಷತ್ತಿನ ಅಧಿವೇಶನದ…

1 hour ago

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

2 hours ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

2 hours ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ ದಿನದ ಅಂಗವಾಗಿ ಸ್ವಾತಂತ್ರ್ಯಹೋರಾಟಗಾರ ತಗಡೂರು ಗಾಂಧಿ ಎಂದೇ ಖ್ಯಾತರಾಗಿದ್ದ ರಾಮಚಂದ್ರರಾಯರಿಂದ ಸ್ಥಾಪಿತವಾದ ತಗಡೂರು ಖಾದಿ ಕೇಂದ್ರದಲ್ಲಿ…

2 hours ago