ಮೈಸೂರು ನಗರ

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶೆಡ್‌ವೊಂದರಲ್ಲಿ ತಪಾಸಣೆ ನಡೆಸಿದ್ದಾರೆ.

ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಬೆಂಗಳೂರು ಹಾಗೂ ಇನ್ನಿತರ ಕಡೆಗಳಲ್ಲಿ ಕೆಲ ಆರೋಪಿಗಳನ್ನು ಮಾದಕ ದ್ರವ್ಯ ನಿಯಂತ್ರಣ ಘಟಕದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಿಚಾರಣೆ ವೇಳೆ ಅವರುಗಳು ಮೈಸೂರಿನಲ್ಲಿ ಕೂಡ ಘಟಕವಿದೆ ಎಂಬ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳ ತಂಡ ಮೈಸೂರಿಗೆ ಆಗಮಿಸಿದೆ. ಇದೇ ವೇಳೆ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಇರುವ ಟುಕ್ಕು ಕೆಮಿಕಲ್ ಪ್ರೊಡಕ್ಷನ್ ಸಲ್ಯೂಷನ್ ಎಂಬ ಫಲಕವಿದ್ದ ಶೆಡ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಕೆಲ ವಸ್ತುಗಳನ್ನು ವಶಕ್ಕೆ ಪಡೆದು ತೆರಳಿದ್ದಾರೆ. ಡಿಟರ್ಜೆಂಟ್, ಸೋಡಾ, ಉಪ್ಪು ಸೇರಿದಂತೆ ಕಚ್ಚಾವಸ್ತುಗಳು ಪತ್ತೆ ಆಗಿವೆ. ಆದರೆ, ಯಾವುದೇ ಮಾದಕ ದ್ರವ್ಯ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

46 mins ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

49 mins ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

5 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

5 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

5 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

5 hours ago