ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಮುಂದಿನ ತಿಂಗಳು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ನಿರ್ಧಾರ ಮಾಡಿದ್ದಾರೆ.
ಇಂದು ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳ ಶೋಷಿತ ಸಮಾಜಗಳು ಮೈಸೂರಿನಲ್ಲಿ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡೆಯನ್ನು ಖಂಡಿಸಿ ಸಮಾವೇಶ ನಡೆಸಲಾಗುವುದು ಎಂದು ತಿಳಿಸಲಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಸಹ ಸಮಾವೇಶದಲ್ಲಿ ಎಳೆ ಎಳೆಯಾಗಿ ಬಿಚ್ಚಿಡಲಾಗುವುದು. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ನೈತಿಕ ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.
ಇಂದು ನಡೆದ ಸಭೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಬಿ.ಜೆ.ವಿಜಯಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗಿಯಾಗಿದ್ದರು.





