ಮೈಸೂರು ನಗರ

ಕುಡಿಯುವ ನೀರಿಗೆ ಕೊರತೆ ಆಗದಂತೆ ಕ್ರಮ ಕೈಗೊಳ್ಳಿ: ಜಿ ಲಕ್ಷ್ಮೀಕಾಂತರೆಡ್ಡಿ ಸೂಚನೆ

ಮೈಸೂರು: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆ ಆರ್ ಎಸ್, ಕಬಿನಿ ಅಣೆಕಟ್ಟುಗಳಲ್ಲಿ ಇರುವ ನೀರಿನ ಲಭ್ಯತೆಯ ಮಾಹಿತಿಯನ್ನು ಪಡೆದ ಅವರು ಜೂನ್ ಅಂತ್ಯದ ವರೆಗೆ ಅಣೆಕಟ್ಟುಗಳಲ್ಲಿ ಇರುವ ನೀರಿನ ಪ್ರಮಾಣ ಸಾಕಾಗುತ್ತದೆ. ಕಬಿನಿ ಅಣೆಕಟ್ಟಿನಿಂದ ಕುಡಿಯುವ ನೀರಿಗೆ ಅಗತ್ಯವಿದ್ದಾಗ ಕಬಿನಿಯಿಂದ ಚಾನೆಲ್ ಮೂಲಕ ನೀರನ್ನು ಕಾಲ ಕಾಲಕ್ಕೆ ಹರಿಸಿ ಕುಡಿಯುವ ನೀರನ್ನು ಪೂರೈಸುವಂತೆ ಕಬಿನಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಶೀಲ್ದಾರ್‌ಗಳು ತಾಲ್ಲೂಕು ಮಟ್ಟದಲ್ಲಿ ಪ್ರತಿ ವಾರ ಕುಡಿಯುವ ನೀರಿನ ನಿರ್ವಹಣೆ ಕುರಿತು ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

ಬೇಸಿಗೆ ಕಾಲ ಆರಂಭವಾಗಿದ್ದು, ಕಾಡ್ಗಿಚ್ಚು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೈಗೊಳ್ಳಬೇಕು. ಕಳೆದ ವರ್ಷ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಎಸ್ ಯುಕೇಶ್ ಕುಮಾರ್ ಅವರು ಮಾತನಾಡಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಬರಬಹುದಾದ ಗ್ರಾಮಗಳನ್ನು ಗುರುತಿಸಿಕೊಳ್ಳಿ. ಕುಡಿಯುವ ನೀರಿನ ಸಮಸ್ಯೆ ಉಂಟಾದ ನಂತರ ಕ್ರಮ ವಹಿಸುವ ಬದಲು ಮೊದಲೇ ಕ್ರಮ ವಹಿಸಬೇಕು. ನೀರಿನ ನಲ್ಲಿ ಗಳಿಗೆ ಆಫ್ ಅಂಡ್ ಆನ್ ಕ್ಯಾಪ್ ಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದ ಅವರು ಅಗತ್ಯ ವಿದ್ದರೆ ಕೊಳವೆ ಬಾವಿಗಳನ್ನು ಕೊರೆಸಲು ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಗಳಾದ ಡಾ. ಪಿ ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

4 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

5 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

6 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

6 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

6 hours ago