ಮೈಸೂರು ನಗರ

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಬೇಸರ ಹೊರಹಾಕಿದ್ದಾರೆ.

ಇರಾನ್‌-ಇಸ್ರೇಲ್‌ ಸಂಘರ್ಷದ ಕಾರಣದಿಂದ ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಸೋದ್ಯಮ ನಗರ ಮೈಸೂರಿಗೆ ಬರೋಕೆ ಯೋಚನೆ ಮಾಡುವಂತಾಗಿದೆ. ಈಗಾಗಲೇ ಕೇಳಿ ಕೇಳಿ ರೂಂ ಬುಕ್ ಮಾಡಿದ್ದಾರೆ. ಕೆಲವು ಕಡೆ ಊಟದ ವಿಚಾರಕ್ಕೆ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಸಚಿವ ಮುನಿಯಪ್ಪ ಅವರು ಒಂದು ವಾರ ತಡೆದುಕೊಳ್ಳಬೇಕು ಎಂದಿದ್ದಾರೆ. ನಾವು ತಡೆದುಕೊಂಡರೆ ಪ್ರವಾಸಿಗರಿಗೆ ಊಟ ಕೊಡುವುದು ಹೇಗೆ. ಈಗಾಗಲೇ 10% ಹೋಟೆಲ್ ಮುಚ್ಚಿವೆ. ಖಾಸಗಿಯಾಗಿ ಹೆಚ್ಚು ಹಣ ಕೊಟ್ಟು ಸಿಲಿಂಡರ್ ಪಡೆದುಕೊಂಡಿರುವುದರಿಂದ ಇಷ್ಟಾಗಿದೆ. ಇಲ್ಲದೇ ಇದ್ದರೆ ಪರಿಸ್ಥಿತಿ ಇನ್ನೂ ಶೋಚನೀಯ ಸ್ಥಿತಿಗೆ ಬರುತ್ತಿತ್ತು. ರಾಜ್ಯ ಸರ್ಕಾರ ತಕ್ಷಣ ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಶೇಕಡಾ.10 ರಷ್ಟು ಇರುವ ಕಮರ್ಷಿಯಲ್ ಸಿಲಿಂಡರ್ ಅನ್ನು ಶೇಕಡಾ.25ರಷ್ಟು ನೀಡುವಂತೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳು ಮನಸ್ಸು ಮಾಡಿದರೆ ತಕ್ಷಣ ಈ ಸಮಸ್ಯೆ ಬಗೆಹರಿಸಬಹುದು. ನಿನ್ನೆ ವರಕೋಡು ಹಬ್ಬಕ್ಕೂ ಒಂದು ಲೋಡ್ ಸಿಲಿಂಡರ್ ಅನ್ನು ಸಿಎಂ ಕೊಡಿಸಿದ್ದಾರೆ. ಒಂದು ವಾರ, ಹತ್ತು ದಿನ ಕಾಯೋದು ಬೇಡ. ಸರ್ಕಾರ ತಕ್ಷಣ ಕ್ರಮ ವಹಿಸಬೇಕು. ತೆರಿಗೆ ಕಟ್ಟುವ ಉದ್ದಿಮೆದಾರರ ಹಿತ ಕಾಯಬೇಕು. ದಯವಿಟ್ಟು ಶೇಕಡಾ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

32 mins ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

53 mins ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

2 hours ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

2 hours ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

3 hours ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

6 hours ago